ಕಾಂಗ್ರೆಸ್ ನಿಂದ ನೂತನ 24 ಸಚಿವರ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ಸಚಿವ ಸಂಪುಟಕ್ಕೆ ಭಾರೀ ಕಸರತ್ತು ನಡೆದು‌ ಕೊನೆಗೆ ಕಾಂಗ್ರೆಸ್ 24 ಮಂದಿ ನೂತನ ಸಚಿವರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಈಗಾಗಲೇ ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ ಪಟ್ಟಿ ರಾಜಭವನಕ್ಕೆ ರವಾನೆಯಾಗಿದೆ. ನೂತನ ಸಚಿವರು ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿ 10 ಮಂದಿ ಸಂಪುಟದಲ್ಲಿದ್ದು, 34 ಸದಸ್ಯ ಬಲದ ಸಂಪುಟದಲ್ಲಿ ಹಾಲಿ 24 ಸ್ಥಾನಗಳು ಖಾಲಿ ಇತ್ತು. ಸಚಿವ ಸಂಪುಟ ಸೇರ್ಪಡೆಗೆ ಕಸರತ್ತಿನ ಬೆನ್ನಲ್ಲೇ 24 ಸ್ಥಾನಗಳಿಗೂ ಸಚಿವರ ನೇಮಕ‌ ನಡೆದಿದೆ.

Also Read  ಜುಲೈ 02.ರಿಂದ ಕಡಬದ ಸಾಹಿರಾ ಡ್ರೆಸ್ ಪ್ಯಾಲೇಸ್ ನಲ್ಲಿ ಸ್ಟಾಕ್ ಕ್ಲಿಯರೆನ್ಸ್ ಸೇಲ್

ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌, ಸೋನಿಯಾಗಾಂಧಿ, ರಾಹುಲ್ , ಪ್ರಿಯಾಂಕ ಗಾಂಧಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರೊಂದಿಗೆ ಸರಣಿ ಸಭೆ ನಡೆಸಿ ಪಟ್ಟಿ ಬಿಡುಗಡೆ ಮಾಡಲಾಗಿದೆ.

 

error: Content is protected !!
Scroll to Top