ಕರಾವಳಿ ಮತ್ತು ದ. ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.27. ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ತಿಂಗಳಾಂತ್ಯದಿಂದ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 30 ಹಾಗೂ 31ರಂದು ಹೆಚ್ಚಿನ ಮಳೆಯಾಗಲಿದ್ದು, ಮೇ 31ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅತಿ ಹೆಚ್ಚು 5 ಸೆಂ.ಮೀ. ಮಳೆಯಾದ ವರದಿಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಕೊಣನೂರು, ವಿಜಯ ನಗರದ ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ. ಮಳೆಯಾದ ವರದಿಯಾಗಿದೆ.

Scroll to Top