ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪುರ, ಮೇ.29. ಕೆಲ ದಿನಗಳಿಂದ ತಣ್ಣಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿ ತಿಳಿಸಿದೆ. ಬಹುಸಂಖ್ಯಾತ ಹಿಂದೂ ಮೀಟಿ ಸಮುದಾಯದವರನ್ನು ಗುರಿಯಾಗಿಸಿ ಕುಕಿ ಉಗ್ರರು ನಡೆಸಿದ ದಾಳಿಗೆ ಇಬ್ಬರು ಬಲಿಯಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಜೊತೆಗೆ ಉಗ್ರರು 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸೇನೆಯ ಹೆಚ್ಚುವರಿ ಪಡೆಯನ್ನು ರವಾನಿಸಲಾಗಿದೆ. ಸೇನಾ ಮುಖ್ಯಸ್ಥ ನರವಣೆ ಪರಿಸ್ಥಿತಿಯ ಅಧ್ಯಯನಕ್ಕೆ ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಿರುವ ಹೊತ್ತಿನಲ್ಲೇ ಈ ಬೆಳವಣಿಗೆ ನಡೆದಿದೆ ಎಂದು ತಿಳಿದುಬಂದಿದೆ.

Also Read  2040ಕ್ಕೆ ಮಾನವ ಸಹಿತ ಚಂದ್ರಯಾನ-4 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

 

error: Content is protected !!
Scroll to Top