ಪದವಿ ಕಾಲೇಜುಗಳ `ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ.!➤ ಜು.17 ರಿಂದ ತರಗತಿ ಆರಂಭ

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.29 ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ.

ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. 13 ರಿಂದ 2 ನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಿ, ಜೂನ್ 29 ರೊಳಗೆ ಫಲಿತಾಂಶ ನೀಡಬೇಕು ಎಂದು ರಾಜ್ಯದ ಎಲ್ಲ ವಿವಿಗಳು, ಪದವಿ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

Also Read  ವಿವೇಕಾನಂದ ವಿದ್ಯಾನಿಕೇತನ ಶಾಲೆಗೆ “ಕುಸ್ಮಾ ಸ್ಕೂಲ್ ಮ್ಯಾನೇಜ್ಮೆಂಟ್ ಎಕ್ಸಲೆನ್ಸ್ ಅವಾರ್ಡ್” ಗೌರವ
error: Content is protected !!
Scroll to Top