(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದರು.