ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.29.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ ಪೂಜಾರಿ ಎಂಬವರ ಪುತ್ರ ಸಂದೇಶ್ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ಇವರು ಕೊಲ್ಲಿರಾಷ್ಟ್ರದ ಓಮನ್ ದೇಶದ ಮಸ್ಕತ್‌ನಲ್ಲಿ ನೀರಿನ ಕಂಪನಿಯೊಂದರಲ್ಲಿ ಲೈನ್ ಸೇಲ್ ಉದ್ಯೋಗ ಮಾಡುತ್ತಿದ್ದು, ಎಂಟು ತಿಂಗಳ ಹಿಂದೆಯಷ್ಟೆ ಕೆಲಸಕ್ಕೆ ಸೇರಿದ್ದರು. ಇವರ ಸಹೋದರ ಸಂತೋಷ್ ಕೂಡಾ ಮಸ್ಕತ್‌ನಲ್ಲೇ ಉದ್ಯೋಗದಲ್ಲಿದ್ದು ಒಂದೇ ಕೊಠಡಿಯಲ್ಲಿ ವಾಸವಾಗಿದ್ದರು. ಇವರ ಸಂಬಂಧಿ ಯುವಕ ಕೊಯಿಲ ಗ್ರಾಮದ ಅಂಬಾ ನಿವಾಸಿ ಚರಣ್ ಎಂಬ ಯುವಕ ಕೂಡಾ ಮಸ್ಕತ್‌ನಲ್ಲಿ ಉದ್ಯೋಗದಲ್ಲಿದ್ದು ಇವರು ಇನ್ನೊಂದು ಕೊಠಡಿಯಲ್ಲಿ ವಾಸವಾಗಿದ್ದಾರೆ. ಸಂದೇಶ್ ಅವರು ಬೇಗ ಕರ್ತವ್ಯ ಮುಗಿಸಿ ಕೊಠಡಿಗೆ ಆಗಮಿಸಿ ಮಧ್ಯಾಹ್ನದ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇದಾದ ಕೆಲವು ಹೊತ್ತಿನ ಬಳಿಕ ಚರಣ್ ಅವರು ಸಂದೇಶ್ ಇರುವ ಕೊಠಡಿಗೆ ಬಂದು ನೋಡಿದಾಗ ಕೊಠಡಿ ಬಾಗಿಲು ಬಂದ್ ಆಗಿತ್ತು. ಕದತಟ್ಟಿದರೆ ಯಾವುದೇ ಉತ್ತರ ಬಾರದೇ ಹೋದಾಗ ಸಂಶಯಗೊಂಡು ಗಾಬರಿಯಿಂದ ಸಂದೇಶ್ ಸಹೋದರ ಸಂತೋಷ್‌ಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ. ಕೊಠಡಿಯ ಒಂದು ಕೀ ಸಂತೋಷ್ ಅವರಲ್ಲಿ ಇದ್ದುದರಿಂದ ಬಾಗಿಲು ತೆರೆದು ನೋಡುವಾಗ ಕೊಠಡಿಯ ಒಳಗಿನ ಫ್ಯಾನ್‌ಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು, ಯುವಕ ಮೃತಪಟ್ಟಿರುವುದು ಆಗಲೇ ದೃಢಪಟ್ಟಿತ್ತು. ಆ ದೇಶದ ನಿಯಮಾಳಿಗಳ ಪ್ರಕಾರ ಮರಣೋತ್ತರ ಪರೀಕ್ಷೆಗಳ ಪ್ರಕ್ರಿಯೆ ಮುಗಿದು ಮಂಗಳವಾರ ಅಥವಾ ಬುಧವಾರ ಮೃತದೇಹ ಊರಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.

Also Read  ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್

ಸಂದೇಶ ಸಹೋದರ ಸಂತೋಷ್ ಏಳು ವರ್ಷಗಳ ಹಿಂದೆ ಮಸ್ಕತ್‌ಗೆ ಉದ್ಯೋಗಕ್ಕೆ ತೆರಳಿದ್ದರು. ಮೃತ ಸಂದೇಶ ಕಳೆದ ಕೆಲವು ವರ್ಷಗಳಿಂದ ಚೆನ್ನೈನ ಹೋಟೇಲ್‌ನಲ್ಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಆರಂಭದಲ್ಲಿ ವಿಸಿಟಿಂಗ್ ವೀಸಾದಲ್ಲಿ ಮಸ್ಕತ್‌ಗೆ ತೆರಳಿದ್ದ ಸಂದೇಶ್ ಬಳಿಕ ಅಲ್ಲಿನ ಕೆಲಸದ ವೀಸಾ ಪಡೆದು ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯಲ್ಲಿ ಉತ್ತಮ ವೇತನ ಹಾಗೂ ಯಾವುದೇ ಕಿರಿಕಿಯಿಲ್ಲದ ಉದ್ಯೋಗ ಇದ್ದು ಯಾವುದೇ ಸಮಸ್ಯೆಗಳು ಇರಲಿಲ್ಲ ಎಲ್ಲವೂ ಸುಸೂತ್ರವಾಗಿಯೇ ಇತ್ತು, ಅಣ್ಣ ತಮ್ಮ ಸಂತೋಷವಾಗಿಯೇ ಇದ್ದರು. ಸಾರಿ ಅಣ್ಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬ ಮೂಲ ತಿಳಿಸಿದ್ದು, ಆತ್ಮಹತ್ಯೆಗ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಸಂತೋಷ್, ಊರಿನಲ್ಲಿ ಅಟೋ ಚಾಲಕನಾಗಿರುವ ಸಹೋದರ ಸತೀಶ್ ಹಾಗೂ ತಾಯಿ ವಿಮಲ ಅವರನ್ನು ಅಗಲಿದ್ದಾರೆ.

Also Read  ಹೆಚ್ಚಾಗಿ ಲವ್ ಮಾಡಿ ಮದುವೆ ಆಗುತ್ತಾರೆ ಈ 5 ರಾಶಿಯವರು!ನಿಜವಾದ ಪ್ರೀತಿ ಇವರಿಗೆ ಸಿಗುತ್ತದೆ. ನಿಮ್ಮ ರಾಶಿ ಇದ್ದೀಯ ತಿಳಿದುಕೊಳ್ಳಿ

 

error: Content is protected !!
Scroll to Top