ಕಡಬ: ನರ್ಸಿಂಗ್ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.02. ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.

ಮೃತರನ್ನು ಕಡಬ ತಾಲೂಕು ರೆಂಜಿಲಾಡಿಯ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ರಶ್ಮಿತಾ‌(18) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ರಶ್ಮಿತಾ, ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ. ಆರೋಗ್ಯವಾಗಿದ್ದ ರಶ್ಮಿತಾ ಗುರುವಾರ ರಾತ್ರಿ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

Also Read  ಕಡಬ: ಮರದಿಂದ ಬಿದ್ದು ಬಾಲಕ ಮೃತ್ಯು..!!!

error: Content is protected !!
Scroll to Top