(ನ್ಯೂಸ್ ಕಡಬ) newskadaba.com
ಉಪ್ಪಿನಂಗಡಿ, ಜ.20. ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಜೀಪಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಗಾಯಗೊಂಡ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಶುಕ್ರವಾರದಂದು ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕನನ್ನು ಕುಕ್ಕೇ ಸುಬ್ರಹ್ಮಣ್ಯ ನಿವಾಸಿ ವೇಣುಗೋಪಾಲ್ ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ನವೀನ್ ಎಂಬವರೊಂದಿಗೆ ಜೀಪಿನಲ್ಲಿ ಶಿರಾಡಿಯಿಂದ ಗುಂಡ್ಯಕ್ಕೆ ಹೋಗುತ್ತಿದ್ದ ಸಂದರ್ಭ ಅಡ್ಡಹೊಳೆಯಲ್ಲಿ ನವೀನ್ ಅವರು ಜೀಪು ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರು. ಆಗ ಹಿಂಬದಿಯಿಂದ ಬಂದ ಲಾರಿ ಇವರ ಜೀಪಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಪುರುಷೋತ್ತಮ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.