ಚಂಡಮಾರುತದ ಭೀತಿ ➤ ಕರಾವಳಿಯಲ್ಲಿ 4 ದಿನ ಭಾರಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 07. ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

 

Also Read  ಮಂಗಳೂರು: " ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

error: Content is protected !!
Scroll to Top