ವಾಯುಭಾರ ಕುಸಿತ ಹಿನ್ನೆಲೆ ➤ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ

(ನ್ಯೂಸ್ ಕಡಬ) newskadba.com ಮಂಗಳೂರು, ಜೂ. 08. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರಿಗೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.

ಮಕ್ಕಳನ್ನು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರಿಗೆ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು. ಪ್ರವಾಸಿಗರು, ಸಾರ್ವಜನಿಕರು, ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆವಹಿಸುವುದು. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಟೋಲ್ ಫ್ರೀ ಸಂಖ್ಯೆ 24/7 ಕಂಟ್ರೋಲ್ ರೂಮ್- 1077/0824-2442590 ಸಂಪರ್ಕಿಸುವುದು.

Also Read  ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಿಸುತ್ತ ದಿನ ಭವಿಷ್ಯ ತಿಳಿಯೋಣ

ತುರ್ತು ಸೇವೆಗೆ ನಿಯಂತ್ರಣ ಕೊಠಡಿಗಳ ವಿವರ
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ-1077 (0824- 2442590) 24/7 ಕಾರ್ಯಾಚರಣೆಯಲ್ಲಿರುತ್ತದೆ.

ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿ ಸಂಖ್ಯೆಗಳು:
ಮಂಗಳೂರು-0824-2220587/596, ಉಳ್ಳಾಲ-0824-2204424, ಬಂಟ್ವಾಳ- 08255-232120/232500, ಪುತ್ತೂರು- 08251-230349/232799, ಬೆಳ್ತಂಗಡಿ-08256-232047/233123, ಸುಳ್ಯ- 08257-231231/230330/298330, ಮೂಡಬಿದ್ರೆ- 08258-238100/239900, ಕಡಬ-08251-260435, ಮುಲ್ಕಿ- 0824-2294496 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ

error: Content is protected !!
Scroll to Top