ಬೆಳ್ತಂಗಡಿ: ಒಂಟಿ ವೃದ್ಧೆಯನ್ನು ಕೊಲೆಮಾಡಿ ನಗ-ನಗದು ದರೋಡೆ ಪ್ರಕರಣ ➤ ಬಂಧಿತ ಆರೋಪಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 08. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಶುಗರ್ ಹಾಗೂ ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಅಶೋಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top