ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadba.com ಪಡುಬಿದ್ರಿ, ಜೂ. 08. ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ನಡೆದಿದೆ.

ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Scroll to Top