ಗೃಹಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 08. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಯ ಕುರಿತು ಅಧಿಕೃತ ಆದೇಶ ಹೊರಬಿದ್ದಿದ್ದು, ಇದರ ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು ಷರತ್ತುಗಳನ್ನು ವಿಧಿಸಿದೆ. ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಲು, ಇತ್ತೀಚೆಗೆ ನಡೆದ ಸಚಿವ ಸಂಪುಟದ ಅನುಮೋದನ ಪಡೆದುಕೊಂಡಿತ್ತು. ಸದ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ.

ಪ್ರಮುಖ ಷರತ್ತುಗಳೇನು?

  1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
  2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
  3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
  4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
  5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
Also Read  ಬಂಟ್ವಾಳ: ಕಾರು ಢಿಕ್ಕಿ - ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತಪ್ಪು ಮಾಹಿತಿ ನೀಡಿದರೆ ಸೂಕ್ತ ಕ್ರಮ ಎಚ್ಚರಿಕೆ:- ಯೋಜನೆಗೆ ಅರ್ಜಿ ಸಲ್ಲಿಸುವರಿಗೆ ಸ್ವಯಂ ಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡಲಾಗುತ್ತದೆ. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡಲಾಗುತ್ತದೆ. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡಲಾಗುತ್ತದೆ. ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Also Read  ಸ್ವಾತಂತ್ರ್ಯ ದಿನಾಚರಣೆಯ ಹಿನ್ನಲೆಯಲ್ಲಿ ಮಂಗಳೂರು ➤ರೈಲ್ವೇ ನಿಲ್ದಾಣದಲ್ಲಿ ತಪಾಸಣೆ

error: Content is protected !!