ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳಜೂ. 09. ಬೈಕ್ ಹಾಗೂ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.

 

ಮೃತ ವ್ಯಕ್ತಿಯನ್ನು ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Scroll to Top