ಒಡಿಶಾದ ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ



(ನ್ಯೂಸ್ ಕಡಬ) com ಒಡಿಶಾ, ಜೂ. 09. ನೌಪಾದಾ ಜಿಲ್ಲೆಯ ದುರ್ಗ್ ಪುರಿ ಎಕ್ಸ್ಪ್ರೆಸ್‌ನ ಬೋಗಿಯೊಳಗೆ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಭಯಭೀತರಾದ ಘಟನೆ ಒಡಿಶಾದಲ್ಲಿ ನಡೆದಿದೆ.







ದುರ್ಗ್ ಪುರಿ ಎಕ್ಸ್‌ ಪ್ರೆಸ್‌ ಗುರುವಾರ ಸಂಜೆ ಖರಿಯಾರ್ ರಸ್ತೆ ನಿಲ್ದಾಣಕ್ಕೆ ತಲುಪುತ್ತಿದ್ದಂತೆ ರೈಲಿನ ಬಿ3 ಕೋಚ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರೈಲ್ವೆ ಅಧಿಕಾರಿಗಳು ಒಂದು ಗಂಟೆಯೊಳಗೆ ಸಮಸ್ಯೆಯನ್ನು ಸರಿಪಡಿಸಿ ರೈಲು ರಾತ್ರಿ 11 ಗಂಟೆಗೆ ನಿಲ್ದಾಣದಿಂದ ಹೊರಟಿತು. ಹೊಗೆ ಪತ್ತೆಯಾದಾಗ ಅನೇಕ ಪ್ರಯಾಣಿಕರು ರೈಲಿನಿಂದ ಹೊರಬಂದಿದ್ದು, ಭಯಭೀತರಾಗಿದ್ದರು. ಘಟನೆಯಲ್ಲಿ ಯಾವುದೇ ಗಾಯ ಅಥವಾ ಪ್ರಾಣಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.






error: Content is protected !!
Scroll to Top