ನಾಳೆಯಿಂದ ಶಕ್ತಿ ಯೋಜನೆಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 10. ನಾಳೆ (ಜೂ.11) ಭಾನುವಾರ ಮಧ್ಯಾಹ್ನ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.


ಈ ಕುರಿತು ಮಾಹಿತಿ ನೀಡಿರುವ ಅವರು, ನಾಳೆ ಸಿಎಂ ‘ಶಕ್ತಿ ಯೋಜನೆ’ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗಿ, ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದರು. ಇನ್ನು ಎಲ್ಲರೂ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದ್ದು, ಅಲ್ಲಿಯವರೆಗೆ ತಮ್ಮಲ್ಲಿರುವ ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.

Also Read  24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!!

error: Content is protected !!
Scroll to Top