ಕಲುಷಿತ ನೀರಿನ ದುರಂತ ಮತ್ತೆ ಮರುಕಳಿಸಿದರೆ ಸಿಇಒ ಅಮಾನತು ➤ ಸಿಎಂ ಖಡಕ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರಿನ ಅನಾಹುತ ಪುನಃ ಮರುಕಳಿಸಿದರೆ ನೇರವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ಹೊಣೆ ಮಾಡಿ ಅಮಾನತುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಡೆಯ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಮೊದಲ ಅನಾಹುತ ಸಂಭವಿಸಿದಾಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ಮತ್ತೆ ಘಟನೆ ಮರುಕಳಿಸಿದೆ. ನೀವು ಏನ್ ಮಾಡ್ತಾ ಇದೀರಿ? ಕಚೇರಿಯಲ್ಲಿ ಕುಳಿತು ಕೆಲಸ ಮಾಡಬಾರದು. ಸ್ಥಳಕ್ಕೆ ಭೇಟಿ ನೀಡಿ ಸಮಗ್ರವಾಗಿ ಅಧ್ಯಯನ ನಡೆಸಿ. ಮತ್ತೆ ಕಲುಷಿತ ನೀರಿನ ಅನಾಹುತ ಆಗಬಾರದು. ಮತ್ತೆ ಮರುಕಳಿಸಿದರೆ ನೀವೇ ಹೊಣೆ ಆಗುತ್ತೀರಿ. ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

Also Read  ಪ್ರಾಸಿಕ್ಯೂಷನ್ ಪ್ರಕರಣ- ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ..! ರಾಜ್ಯ ಸರಕಾರಕ್ಕೆ ಪತ್ರ

error: Content is protected !!
Scroll to Top