ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ವಿದ್ಯುತ್ ಶಾಕ್ ➤ ಇಬ್ಬರು ಲೈನ್ ಮ್ಯಾನ್ ಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ. 12. ವಿದ್ಯುತ್ ಟ್ರಾನ್ಸ್ ಫಾರ್ಮರ್ ದುರಸ್ಥಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಪವರ್ ಮ್ಯಾನ್ ಗಳು ಗಾಯಗೊಂಡ ಘಟನೆ ಕೋಟದ ಉಪ್ಲಾಡಿ ಸಮೀಪ ತಸ್ಮಯಿ ರೆಸಿಡೆನ್ಸಿ ಅಪಾರ್ಟ್ಮೆಂಟ್ ಬಳಿ ನಡೆದಿದೆ.

ಗಾಯಗೊಂಡವರನ್ನು ಕೋಟ ಮೆಸ್ಕಾಂ ಪವರ್ ಮ್ಯಾನ್ ಗಳಾದ ರಮೇಶ್ (27) ಹಾಗೂ ಸುದರ್ಶನ್ (26) ಎಂದು ಗುರುತಿಸಲಾಗಿದೆ. ಘಟನೆಯಿಂದ ಇಬ್ಬರ ಮುಖ ಹಾಗೂ ಕೈ ಭಾಗ ಸುಟ್ಟು ಹೋಗಿದ್ದು, ಸಹಾಯಕ ಪವರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್ ಗಂಭೀರ ಗಾಯಗೊಂಡಿದ್ದಾರೆ. ರಮೇಶ್ ಹಾಗೂ ಸುದರ್ಶನ್ ಇಬ್ಬರೂ 2016ರಲ್ಲಿ ಖಾಯಂ ಪವರ್ ಮ್ಯಾನ್ ಗಳಾಗಿ ಸೇರ್ಪಡೆಗೊಂಡಿದ್ದು, ಕಳೆದ ಏಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮಳೆಗಾಲದ ಆರಂಭದಲ್ಲಿಯೇ ಈ ಘಟನೆ ನಡೆದಿರುವುದು ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group