ಉಚಿತ ಬಸ್ ಪ್ರಯಾಣಕ್ಕೆ ಒರಿಜಿನಲ್ ಐಡಿ ಬೇಕಿಲ್ಲ ➤ ಸಾರಿಗೆ ಇಲಾಖೆಯಿಂದ‌ ಪರಿಷ್ಕೃತ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿದ ಬಳಿಕ ರಾಜ್ಯಾದ್ಯಂತ ಮಹಿಳೆಯರು ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ನಡೆಸುತ್ತಿದ್ದಾರೆ.

ಈ ವಿಚಾರವಾಗಿ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಮಾತಿನ ಚಕಮಕಿಗಳು ನಡೆದಿದ್ದು, ಇದರಿಂದ ಎಚ್ಚೆತ್ತ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಹೇಳಿದೆ. ಈ ಮೂಲಕ ಒರಿಜಿನಲ್​ ಐಡಿಯೇ ಬೇಕಿಲ್ಲ, ನಕಲು ಜೆರಾಕ್ಸ್ ಪ್ರತಿ ಇದ್ದರೆ ಸಾಕು ಎಂದು ಸಾರಿಗೆ ಇಲಾಖೆ ಎಲ್ಲಾ ಗೊಂದಲಗಳಿಗೆ ಇದೀಗ ತೆರೆ ಎಳೆದಿದೆ. ಈ ಕುರಿತು ಸಾರಿಗೆ ಇಲಾಖೆ, ತಿದ್ದುಪಡಿ ಆದೇಶ ಹೊರಡಿಸಿದ್ದು, ಆಧಾರ್ ಕಾರ್ಡ್ ಹಾಗೂ ವೋಟರ್​ ಐಡಿಯ ಝರಾಕ್ಸ್​ ಇದ್ದರೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Also Read  ಬಟ್ಟೆ ತೊಳೆಯಲು ಕಾಲುವೆಗಿಳಿದ ಇಬ್ಬರು ಜಲಸಮಾಧಿ

error: Content is protected !!
Scroll to Top