(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕರಾವಳಿಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮತ್ತು ಬಶೀರ್ ಮನೆಗಳಿಗೆ ರವಿವಾರ ಭೇಟಿ ನೀಡಿದರು.
ದೀಪಕ್ ಹಾಗೂ ಬಶೀರ್ ಕುಟುಂಬದ ಸದ್ಯದ ಪರಿಸ್ಥಿತಿಯ ಬಗ್ಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರಿಂದ ಮಾಹಿತಿ ಪಡೆದುಕೊಂಡ ದೇವೇಗೌಡರು ದೀಪಕ್ ಹಾಗೂ ಬಶೀರ್ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.