ಅಪ್ರಾಪ್ತ ಬಾಳಕಿಗೆ ಲೈಂಗಿಕ  ದೌರ್ಜನ್ಯ ➤ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ)newskadaba.com ಉಡುಪಿ,  ಜೂ  . 16 .  ಎರಡು ವರ್ಷಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ತಂದೆ ಹಾಗೂ ಮಗನಿಗೆ ಉಡುಪಿ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ.

ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ದಾವಣಗೆರೆಯ  ಶಿವಶಂಕರ್ ಹಾಗೂ ಆತನ ಮಗ ಸಚಿನ್ ಎಂದು ಗುರುತಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ 2020ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಬೆಳಗಿನ ಜಾವ 5 ಗಂಟೆಗೆ ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೆಲಸಕ್ಕೆ ಹೋದ ಸಂದರ್ಭ ಶಿವಶಂಕರ್ ಬಾಲಕಿಯನ್ನು ಹಲವು ಬಾರಿ ದೈಹಿಕ ಸಂಪರ್ಕ ಮಾಡಿರುವುದಾಗಿ ದೂರು ದಾಖಲಾಗಿತ್ತು. ಅಲ್ಲದೇ ಶಿವಶಂಕರ್ನ ಮಗ ಸಚಿನ್ ಮನೆಯಲ್ಲಿ ಬಾಲಕಿ ಒಬ್ಬಳೇ ಇರುವಾಗ ಮೇ ತಿಂಗಳಲ್ಲಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಬಾಲಕಿ ನೆರೆಮನೆಯವರಲ್ಲಿ ಹೇಳಿಕೊಂಡಿದ್ದಳು. ಈ ಕುರಿತಂತೆ ನೆರೆಮನೆ ಮಹಿಳೆ ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದರು.ಆಗಿನ ಮಕ್ಕಳ ರಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ ಅವರು ಬಾಲಕಿಯನ್ನು ರಕ್ಷಿಸಿ ಆರೋಪಿಗಳ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಆಗಿನ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಂತ್ ಎಂ. ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.22 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ವಿಚಾರಣೆಯನ್ನು ನ್ಯಾಯಾಲಯದಲ್ಲಿ ನಡೆಸಲಾಯಿತು. ಬಾಲಕಿಯ ಸಾಕ್ಷಿ ಮತ್ತು ಇತರ ಸಾಂದರ್ಭಿಕ ಸಾಕ್ಷಿಯನ್ನು ಪರಿಗಣಿಸಿ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿರುವುದಾಗಿ ಅಭಿಪ್ರಾಯಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ, ಅತ್ಯಾಚಾರ ಪ್ರಕರಣದಡಿ ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲುಶಿಕ್ಷೆ, 10 ಸಾವಿರ ರೂ. ದಂಡ, ಪೋಕ್ಸೋ ಕಲಂನಡಿ ತಲಾ 20 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷಗಳ ಹೆಚುವರಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

Also Read  ಪೈಪ್ ಲೈನ್ ನ ಜಾಯಿಂಟ್ನಲ್ಲಿ ಬಿರುಕು ➤ ನೀರಿನ ಸರಬರಾಜು ಸ್ಥಗಿತ

 

error: Content is protected !!
Scroll to Top