ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರಕಾರ ನಿರಾಕರಣೆ ➤ ಜೂ. 20ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಬಡವರ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವುದನ್ನು ವಿರೋಧಿಸಿ ಮೋದಿ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಜೂ. 20ರಂದು ರಾಜ್ಯದೆಲ್ಲೆಡೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂ. 20ರಂದು ಕಾಂಗ್ರೆಸ್ ಪಕ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಪಕ್ಷದ ನಾಯಕರು, ಶಾಸಕರು ಭಾಗವಹಿಸಲಿದ್ದಾರೆ. ಆ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದ ಎಫ್ ಸಿಐ ಬಳಿಕ ಸಾಧ್ಯವಿಲ್ಲವೆಂದು ಪತ್ರ ಬರೆದಿದೆ. ಬಿಜೆಪಿ ಬಡವರಿಗೆ ದ್ರೋಹ ಮಾಡುವ ಪಕ್ಷವಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Also Read  ಇನ್ನುಮುಂದೆ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಕೆ ನಿಷೇಧ - ಸರಕಾರದಿಂದ ಮಹತ್ವದ ಆದೇಶ

 

error: Content is protected !!
Scroll to Top