ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 16. ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ (9) ಎಂದು ಗುರುತಿಸಲಾಗಿದೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಎಂಬಾತ ಗಾಯಗೊಂಡಿದ್ದು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದ ಶಾಲಾ ಕೊಠಡಿ ಬಳಿ ಆಟವಾಡುತ್ತಿದ್ದರು. ಈ ವೇಳೆ ಹಠಾತ್ತನೆ ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದಿದ್ದು ಬಾಲಕ ವಿಸ್ತ್ರತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top