(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್ ನೂಹ್ಮನ್ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.