(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಭೆ, ಸಮಾರಂಭಗಳಲ್ಲಿ ಹಾರ, ಹೂ ಗುಚ್ಚಗಳನ್ನು ನೀಡುವುದನ್ನು ನಿಷೇಧಿಸಿದ್ದು, ಅದರ ಬದಲು ಇಚ್ಚೆ ಇರುವವರು ಉಡುಗೊರೆ ರೂಪದಲ್ಲಿ ಪುಸ್ತಕಗಳನ್ನು ನೀಡಬಹುದಾಗಿರುತ್ತದೆ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.