ಕಡಬ: ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯಲ್ಲಿ ಗಮನ ಸೆಳೆದ ವಿದ್ಯಾರ್ಥಿಗಳು ► 1 ಸಾವಿರ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ ಶಾಲಾ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಕಡಬ, ಜ.23. ನಮ್ಮಲ್ಲಿ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಎಷ್ಟೇ ಜಾಗೃತಿ ಮೂಡಿಸಿದರೂ ಜನ ಪ್ಲಾಸ್ಟಿಕ್ ಬಳಕೆ ಮಾಡಿ ಪರಿಸರವನ್ನು ಹಾಳುಗೆಡುವುದು ನಿಲ್ಲುವುದಿಲ್ಲ, ಆದ್ದರಿಂದ ಪ್ಲಾಸ್ಟಿಕ್ ಉತ್ಪಾದನೆಯನ್ನೇ ನಿಲ್ಲಿಸಿದರೆ ಅದಕ್ಕೆ ಪೂರ್ಣವಿರಾಮ ಹಾಕಬಹುದು ಎಂದು ಕಡಬ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಪಿ.ವರ್ಗೀಸ್ ಹೇಳಿದರು.

ಅವರು ಮಂಗಳವಾರ ದ.ಕ ಜಿಲ್ಲಾ ಪಂಚಾಯಿತಿ, ಪುತ್ತೂರು ತಾಲೂಕು ಪಂಚಾಯಿತಿ, ಕಡಬ ಗ್ರಾಮ ಪಂಚಾಯಿತಿ ಹಾಗೂ ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೆಬಲ್ ಟ್ರಸ್ಟ್‌ನ ಸಂಯಕ್ತ ಆಶ್ರಯದಲ್ಲಿ ಕಡಬ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ ಜಾಗೃತಿ ಹಾಗೂ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಒಂದು ಉತ್ತಮ ಬೆಳವಣಿಗೆ. ಪರಿಸರವನ್ನು ನಿತ್ಯ ಹಾನಿ ಮಾಡುತ್ತಿರುವ ಪ್ಲಾಸ್ಟಿಕ್ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳುವ ಮೂಲಕ ಪ್ರತೀ ಮನೆಯಲ್ಲಿ ಜಾಗೃತಿ ಮೂಡಿಸುತ್ತಿರುವುದರಿಂದ ಮುಂದೆ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ ಎಂದು ಪಿ.ಪಿ. ವರ್ಗೀಸ್ ಹೇಳಿದರು.

ಕಡಬ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದ ಜೆಸಿಐ ಭಾರತ ವಲಯದ 15 ರ ಕಾರ್ಯಕ್ರಮ ನಿರ್ದೆಶಕ ಜಯೇಶ್ ಬರೆಟ್ಟೊ ಮಾತನಾಡಿ, ಜೆಸಿಐ ಸಂಸ್ಥೆ ಕೇಂದ್ರ ಸರಕಾರ ಸ್ವಚ್ಚತಾ ಅಭಿಯಾನದಲ್ಲಿ ಕೈಜೋಡಿಸಿಕೊಂಡು ಜನರಲ್ಲಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಲೇ ಬಂದಿದೆ. ಬಯಲು ಶೌಚಾಲಯ ಮುಕ್ತ ರಾಷ್ಟ್ರ ಕಟ್ಟಬೇಕು ಎನ್ನುವ ಸಂಕಲ್ಪದೊಂದಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಡಬದಲ್ಲಿ ಶಾಲಾ ಮಕ್ಕಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಘಸಂಸ್ಥೆಗಳ ಸಹಯೋಗದೊಂದಿಗೆ ಜೆಸಿಐನವರು ಅತ್ಯಂತ ಯಶಸ್ವಿಯಾಗಿ ನೇರವೇರಿಸಿರುವುದು ಶ್ಲಾಘನೀಯ ಎಂದರು. ಕಡಬ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಬು ಮುಗೇರ ಸಭೆಯ ಅಧ್ಯಕ್ಷತೆವಹಿಸಿದ್ದರು. ಪುತ್ತೂರು ತಾಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೆಶಕ ನವೀನ್ ಭಂಢಾರಿ, ಜೆಸಿಐ ದ.ಕ ಜಿಲ್ಲಾ ವಲಯ 15 ರ ಘಟಕ ವಿಸ್ತರಣಾ ವಿಭಾಗದ ವಲಯಾಧಿಕಾರಿ ಶಿವಪ್ರಸಾದ್ ಮೈಲೇರಿ ಅತಿಥಿಗಳಾಗಿ ಮಾತನಾಡಿದರು. ದ.ಕ ಜಿಲ್ಲಾ ನೆರವು ಘಟಕದ ಸಮಾಲೋಚನಾ ಅಧಿಕಾರಿಗಳಾದ ನವೀನ್ ಹಾಗೂ ಸತೀಶ್ ಭಟ್ ಸಂಪನ್ಮೂಲಗಳಾಗಿ ಮಾಹಿತಿ ನೀಡಿದರು.

Also Read  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ವೇದಿಕೆಯಲ್ಲಿ ಕಡಬ ಕದಂಬ ಜೆಸಿಐ ಘ1ಟಕದ ಅಧ್ಯಕ್ಷ ವೆಂಕಟೇಶ್ ಪಾಡ್ಲ, ಕಡಬ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜ್ಯೋತಿ ಡಿ ಕೋಲ್ಪೆ, ಸದಸ್ಯರಾದ ನೀಲಾವತಿ ಶಿವರಾಮ್, ಸರೋಜಿನಿ ಆಚಾರ್ಯ, ಹರ್ಷ, ಎ.ಎಸ್.ಶರೀಫ್, ಸಮೂಹ ಸಂಪನ್ಮೂಲ ವ್ಯಕ್ತಿ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಕಡಬ ಕದಂಬ ಜೆಸಿಐ ಕಾರ್ಯದರ್ಶಿ ಮೋಹನ ಕೋಡಿಂಬಾಳ ಜೇಸಿವಾಣಿ ವಾಚಿಸಿದರು. ಪೂರ್ವಾಧ್ಯಕ್ಷ ಅಶೋಕ್ ಕುಮಾರ್ ಪಿ ಸ್ಪರ್ಧಾವಿಜೇತರ ಪಟ್ಟಿ ವಾಚಿಸಿದರು. ಜೇಸಿಐ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ನಾಗರಾಜ್ ಎನ್.ಕೆ ಪ್ರಸ್ತಾವನೆಗೈದರು. ಕಡಬ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಸ್ವಾಗತಿಸಿದರು. ಜೆಸಿಐ ಪುವಾಧ್ಯಕ್ಷ ಜಯರಾಮ ಗೌಡ ಅರ್ತಿಲ ವಂದಿಸಿದರು. ಪೂರ್ವಾಧ್ಯಕ್ಷ ಹರೀಶ್ ಬೆದ್ರಾಜೆ ಕಾರ್ಯಕ್ರಮ ನಿರೂಪಿಸಿದರು.

Also Read  ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

error: Content is protected !!
Scroll to Top