ಭೀಕರ ಅಪಘಾತ! ➤ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 19 . ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಕಾರು ಚಾಲಕ ಪ್ರಕ್ಯಾತ್ ಚಿನ್ನಪ್ಪ (22)ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ನಟರಾಜ್, ರಕ್ಷಿತ್, ಬಸವಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣೆ ದಾಖಲಾಗಿದೆ.

 

 

 

Scroll to Top