ಇಂದು ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ

(ನ್ಯೂಸ್ ಕಡಬ) neqskadaba.com ಪುತ್ತೂರು, ಜೂ. 20. ಮೇ ಹಾಗೂ ಜೂನ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು https://karresults.nic.in/ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತಿಳಿಸಿದೆ.


ಪಿಯುಸಿ ಪೂರಕ ಪರೀಕ್ಷೆಗಳು ಮೇ 25 ರಿಂದ ಜೂನ್ 3ರವರೆಗೆ ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಬೆಳಿಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top