ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂ. 30ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group