ಕೇಂದ್ರದಿಂದ ಅನ್ನಭಾಗ್ಯ ಯೋಜನೆ ತಡೆಯುವ ಷಡ್ಯಂತ್ರ ➤ ವಿನಯಕುಮಾರ್ ಸೊರಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 20. ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿರುವ ಕೇಂದ್ರ ಬಿಜೆಪಿ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರದಂದು ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಭವನದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ದ ಘೋಷಣೆ ಕೂಗಿದರು. ಬಳಿಕ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಲಕ್ಷಾಂತರ ಮೆಟ್ರಿಕ್ ಟನ್ ಅಕ್ಕಿಯನ್ನು ತಾಲಿಬಾನ್ ಸರಕಾರಕ್ಕೆ ನೀಡುವ ಕೇಂದ್ರಕ್ಕೆ ಕರ್ನಾಟಕ ರಾಜ್ಯದ ಬಡವರಿಗೆ ನೀಡುವ ಅಕ್ಕಿ ಇಲ್ಲ. ಇದು ಅನ್ನ ಭಾಗ್ಯ ಯೋಜನೆಯನ್ನು ತಡೆಯುವ ಷಡ್ಯಂತ್ರ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ರಮೇಶ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ನರಸಿಂಹ ಮೂರ್ತಿ, ಭಾಸ್ಕರ ರಾವ್ ಕಿದಿಯೂರು, ಅಣ್ಣಯ್ಯ ಶೇರಿಗಾರ್, ಇಸ್ಮಾಯಿಲ್ ಆತ್ರಾಡಿ, ಶಬ್ಬೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.

error: Content is protected !!

Join the Group

Join WhatsApp Group