ಮಂಗಳೂರು: 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್ ಅವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್ ಒ ಡಾ. ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ, ಎಸಿಪಿ ಗೀತಾ ಕುಲಕರ್ಣಿ ವೇದಿಕೆಯಲ್ಲಿದ್ದರು. ಹೋಂ ಗಾಡ್೯, ಯೋಗ ಸಂಘಟನೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್ ಸ್ವಾಗತಿಸಿದರು.

Scroll to Top