ಲಾರಿ- ಬೈಕ್ ನಡುವೆ ಮುಖಾಮುಖಿ ಢಿಕ್ಕಿ ➤ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 21. ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹೊಳೆ ಗೇಟ್ ಬಳಿ ನಡೆದಿದೆ.

ಮೃತ ಸವಾರನನ್ನು ತಾಲೂಕಿನ ಬೇಲೇನಹಳ್ಳಿ ನಿವಾಸಿ ವಿಶ್ವಾಸ್ ಹಾಗೂ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಎಂದು ಗುರುತಿಸಲಾಗಿದೆ. ಇವರು ತರೀಕೆರೆಯಿಂದ ಬೇಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

error: Content is protected !!

Join the Group

Join WhatsApp Group