ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  22. ವಿದ್ಯುತ್ ದರ ಏರಿಕೆ ಖಂಡಿಸಿ KCCI ಯು ಕರ್ನಾಟಕ ಬಂದ್ ಗೆ ಇಂದು ಕರೆ ನೀಡಿದೆ.

ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿದ್ದು, ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ಥಗಿತಗೊಳಿಸಲಿವೆ. ಬಂದ್ ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ ಗಳಿಂದ ಬೆಂಬಲ ದೊರಕಿದೆ. ದಕ್ಷಿಣ ಕರ್ನಾಟಕದ FKCCI ಬಂದ್ ನಲ್ಲಿ ಭಾಗವಹಿಸುತ್ತಿಲ್ಲ ಎಂದು ಮೊದಲೇ ಸ್ಪಷ್ಟಪಡಿಸಿತ್ತು. ಮೈಸೂರು, ಬೀದರ್, ಹುಬ್ಬಳ್ಳಿ ಯಾದಗಿರಿ ಉತ್ತರಕನ್ನಡ, ಹಾವೇರಿ ಮುಂತಾದೆಡೆ ವಾಣಿಜ್ಯ ವಹಿವಾಟು ಸ್ಥಗಿತಗೊಳ್ಳಲಿದ್ದು ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಂದ್ ಗೆ ಬೆಂಬಲವಿಲ್ಲ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂದ್ ಗೆ ಉತ್ತಮ ಸ್ಪಂದನೆ ಸಿಕ್ಕಿದ್ದು ಸ್ವಯಂ ಪ್ರೇರಿತವಾಗಿ ಕಾರವಾರದ ಮಾರುಕಟ್ಟೆ ಬಂದ್ ಮಾಡಲಾಗಿದೆ.

Also Read  ಕಡಬ: ಹೊನಲು ಬೆಳಕಿನ ಮ್ಯಾಟ್ ಅಂಕಣದ ಮುಕ್ತ ಕಬಡ್ಡಿ ಪಂದ್ಯಾಟ ಉಜಿರೆ ಎಸ್.ಡಿ.ಎಂ. ಪ್ರಥಮ, ಬಂಟ್ವಾಳ ಭದ್ರ ಚಾಲೆಂಜರ್ಸ್ ದ್ವಿತೀಯ

error: Content is protected !!
Scroll to Top