ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಗೂನಡ್ಕ, ಜೂ. 22. ಇಲ್ಲಿನ ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಗೂನಡ್ಕದಲ್ಲಿ ಆಚರಿಸಲಾಯಿತು.


ಈ ದಿನದ ಮಹತ್ವದ ಕುರಿತಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸಂಪತ್ ಜೆ.ಡಿ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಯೋಗವು ಜೀವನದ ಪ್ರಮುಖ ಭಾಗವಾಗಿದ್ದು, ನೆಮ್ಮದಿಯ ಜೀವನಕ್ಕೆ ಬಹಳಷ್ಟು ಸಹಾಯಕಾರಿ ಮತ್ತು ವಿದ್ಯಾರ್ಥಿಗಳು ಶಾಲಾ ಹಂತದ ಕಲಿಕೆಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕ ವೃಂದದವರೆಲ್ಲರೂ ಬಹಳ ಉತ್ಸುಕರಾಗಿ ಯೋಗಾಸನಗಳನ್ನು ಮಾಡಿ ಅದನ್ನು ನಿತ್ಯ ಜೀವನದಲ್ಲಿ ಅಳಡಿಸಿಕೊಳ್ಳುವ ನಿರ್ಧಾರದೊಂದಿಗೆ ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಆಡಳಿತ ಮಂಡಳಿ ಸಮಿತಿಯವರು ಉಪಸ್ಥಿತರಿದ್ದರು.

Also Read  ಕೊರಗಜ್ಜನ ಕಟ್ಟೆಗೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ- ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ

error: Content is protected !!
Scroll to Top