ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) com ಉಳ್ಳಾಲ, ಜೂ. 22. ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯ ನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿತಿನ್ ಪೂಜಾರಿ ಎಂದು ಗುರುತಿಸಲಾಗಿದೆ. ನೆರೆಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ತಾಯಿ ಬಂದು ಮನೆಯ ಬಾಗಿಲು ಬಡಿದಾಗ ತೆರೆಯದೇ ಇದ್ದುದರಿಂದ ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣುಬಿಗಿದ ವಿಚಾರ ಬೆಳಕಿಗೆ ಬಂದಿದೆ. ಮೃತದೇಹದ ಪಕ್ಕ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ಪ್ರವೀಣ್ ಶೆಟ್ಟಿ ನೇರ ಕಾರಣ. ಇವರಿಂದ ಮಾನಸಿಕವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ಇವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿ ವಿನಂತಿ ಎಂದು ಬರೆದಿದ್ದಾನೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

Scroll to Top