ಕಾಲೇಜು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ► ಪ್ರತೀ ವಿದ್ಯಾರ್ಥಿಗೆ ಕನಿಷ್ಠ 1 ಜಿಬಿ ಡೇಟಾ ನೀಡಲು ಕೇಂದ್ರ ಸರಕಾರದಿಂದ ಸೂಚನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.24. ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದ್ದು, ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಮಾನವ ಸಂಪನ್ಮೂಲ ಸಚಿವಾಲಯದಿಂದ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಕಂಪೆನಿಗಳು ತಮ್ಮದೇ ವೆಚ್ಚದಲ್ಲಿ ಸೌಲಭ್ಯವನ್ನು ಕಲ್ಪಿಸುವುದರಿಂದ ಸಂಸ್ಥೆಗಳ ಮೇಲೆ ಹೊರೆ ಬೀಳುವುದಿಲ್ಲ ಎಂದು ಹೇಳಲಾಗಿದೆ. ಉಚಿತವಾಗಿ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು 4 ಎಂ.ಬಿ.ಪಿ.ಎಸ್. ವೇಗಕ್ಕಿಂತ ಕಡಿಮೆ ಇಲ್ಲದಂತೆ ನೀಡಲಾಗುವುದು. ಈ ಯೋಜನೆಯಿಂದ ಮೊಬೈಲ್/ ಲ್ಯಾಪ್ ಟಾಪ್ ಗಳಿಗೆ ವಿದ್ಯಾರ್ಥಿಗಳು ಇಂಟರ್ನೆಟ್ ಸೌಲಭ್ಯ ಪಡೆಯಬಹುದಾಗಿದೆ.

error: Content is protected !!

Join the Group

Join WhatsApp Group