ತಾಯಿ-ಮಗಳನ್ನು ಹಿಂಬಾಲಿಸಿಕೊಂಡು ಬಂದ ಯುವಕರು ➤ ಓರ್ವ ವಶಕ್ಕೆ..?

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 23. ಮಹಿಳೆಯೊಬ್ಬರು ತನ್ನ ಮಗಳ ಜೊತೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರಿಬ್ಬರು ಬೆನ್ನಟ್ಟಿಸಿಕೊಂಡು ಬಂದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ನೆಕ್ಕೆಗುಡ್ಡೆ ಎಂಬಲ್ಲಿ ಸಂಭವಿಸಿದೆ.

ಗುರುವಾರದಂದು ಸಂಜೆ ಮಹಿಳೆ ತನ್ನ ಮಗಳನ್ನು ಶಾಲೆಯಿಂದ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಕಾರಿನಲ್ಲಿ ಬಂದ ಯುವಕರಿಬ್ಬರು ನೆಕ್ಕೆಗುಡ್ಡೆ ಎಂಬಲ್ಲಿ ಕಾರು ನಿಲ್ಲಿಸಿ, ಮಹಿಳೆ ಮತ್ತು ಮಗಳನ್ನು ಬೆನ್ನಟ್ಟಿಸಿಕೊಂಡು ಬಂದಿದ್ದಾರೆ. ಇದರಿಂದ ಹೆದರಿದ ಮಹಿಳೆ ಅಂಗಡಿಯೊಂದರ ಬಳಿ ರಕ್ಷಣೆ ಪಡೆದಿದ್ದು, ಈ ವೇಳೆ ಹಿಂಬಾಲಿಸಿಕೊಂಡು ಬಂದ ಯುವಕರು ವಾಪಸಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಮಹಿಳೆ ನೀಡಿದ ದೂರಿನಂತೆ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

Also Read  ಲಾಕ್‌ಡೌನ್ ಅವಧಿಯಲ್ಲೂ ಎಂಆರ್‌ಪಿಎಲ್‌ನಿಂದ ತೈಲ ಸಂಸ್ಕರಣೆ: ರುಡಾಲ್ಫ್ ನೊರೋನ್ಹಾ

error: Content is protected !!
Scroll to Top