(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.21. ಕಳೆದ ಕೆಲವು ದಿನಗಳಿಂದೀಚೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನರ್ವಹಿಸುತ್ತಿದ್ದ ಭೂಷಣ್ ಗುಲಾಬ್ ರಾವ್ ಬೊರಸೆಯವರನ್ನು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾಯಿಸಿದ್ದು, ಪ್ರಸ್ತುತ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕರ್ತವ್ಯದಲ್ಲಿದ್ದ C.H. ಸುಧೀರ್ ಕುಮಾರ್ ರೆಡ್ಡಿಯವರನ್ನು ಜಿಲ್ಲಾ ಎಸ್ಪಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.