ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯಜೂ. 26. ಕರಾವಳಿಯ ತೀರ್ಥ ಕ್ಷೇತ್ರಗಳಿಗೆ ಯಾತ್ರೆ ಕೈಗೊಂಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ ರವರು ಧರ್ಮಸ್ಥಳ ಕ್ಷೇತ್ರದಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.





ದೇವರ ದರ್ಶನ ಪಡೆದು ಸೇವೆ ನೆರವೇರಿಸಿ ಬಳಿಕ ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕರು ರಾಹುಲ್ ಅವರಿಗೆ ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದ ಅವರು ಪ್ರಸಾದ ಸ್ವೀಕರಿಸಿ, ನಂತರ ದೇವಳದಲ್ಲಿ ಪ್ರಸಾದ ಬೋಜನ ಸ್ವೀಕರಿಸಿದರು. ಬಳಿಕ ಆಡಳಿತ ಕಚೇರಿಗೆ ಭೇಟಿ ನೀಡಿದ ರಾಹುಲ್ ಅವರಿಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು.






error: Content is protected !!
Scroll to Top