ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೋಲಿಸ್ ಕಮೀಶನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ. ಕುಖ್ಯಾತ ಆರೋಪಿಗಳ ಬಂಧನದಿಂದ ಉಭಯ ಜಿಲ್ಲೆಗಳಲ್ಲಿ ನಡೆದಿರುವ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳ ಕಳ್ಳತನ ಸೇರಿದಂತೆ 13 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ಹಬೀಬ್ ಹಸನ್ ಎಂಬಾತನು ಈ ಹಿಂದೆ ಎರಡೂ ಜಿಲ್ಲೆಗಳ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 35ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಇನ್ನೊಬ್ಬ ಆರೋಪಿ ಮಹಮ್ಮದ್ ಫೈಜಲ್ 15 ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದ. ಅಲ್ಲದೇ ಈತ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆ ಅನುಭವಿಸಿ ಎಪ್ರಿಲ್ ನಲ್ಲಿ ಜೈಲಿನಿಂದ ಹೊರಬಂದಿದ್ದ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ನಗರದ ಒಂದನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯಕ್ಕೆ ಜೂ. 24ರಂದು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

error: Content is protected !!
Scroll to Top