ಹಿರಿಯ ಸಾಮಾಜಿಕ ಮುಂದಾಳು ಹಮೀದ್ ಕಂದಕ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.24. ಹಿರಿಯ ಸಾಮಾಜಿಕ ಮುಂದಾಳು, ಧಾರ್ಮಿಕ ನೇತಾರ ಹಾಜಿ ಹಮೀದ್ ಕಂದಕ್(68) ಬುಧವಾರ ಸಂಜೆ ಇಹಲೋಕ ತ್ಯಜಿಸಿದರು.

ನಗರದ ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ನಡೆಯುತ್ತಿದ್ದ ಅಹಿಂದ ಕಾರ್ಯಕ್ರಮವೊಂದರಲ್ಲಿ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡುತ್ತಿದ್ದಾಗ ಹಮೀದ್ ಕಂದಕ್ ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಯುನಿಟಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಟ್ರಾವೆಲ್ಸ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಮೀದ್ ಕಂದಕ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

error: Content is protected !!
Scroll to Top