ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು 1 ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಸೋಮವಾರದಂದು ಸಂಜೆ ನಡೆದಿದೆ.

ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಮುರಿದು ಬಿದ್ದಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Also Read  ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್
error: Content is protected !!
Scroll to Top