ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ! 

(ನ್ಯೂಸ್ ಕಡಬ)newskadaba.com ಮಣಿಪಾಲ, ಜು. 4. ಉಡುಪಿ – ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಹೆಚ್ಚಾಗಿದೆ.

Scroll to Top