‘ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನೀತಿ ಇರಬಾರದು’ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜು. 04. ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು. ಭಾರತೀಯರಿಗೆ ರಾಷ್ಟ್ರಗಳು ಕೇವಲ ನೆರೆಹೊರೆಯವರಲ್ಲ, ಅದು ಕುಟುಂಬವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಪಾಕಿಸ್ತಾನದ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸಮ್ಮುಖದಲ್ಲಿ ನಡೆದ ಎಸ್‌ಸಿಒ ನಾಯಕರ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ದೇಶಗಳು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದು ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಾಧನವಾಗಿ ಬಳಸುತ್ತಿದೆ ಎಂದಿದ್ದಾರೆ.ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿರುವ ದೇಶಗಳನ್ನು ಟೀಕಿಸಲು ಎಸ್‌ಸಿಒ ಹಿಂಜರಿಯಬಾರದು, ಎಸ್‌ಸಿಒ ದೇಶಗಳು ಭಯೋತ್ಪಾದನೆಯನ್ನು ಖಂಡಿಸಬೇಕು, ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಇರಬಾರದು ಎಂದು ತಿಳಿಸಿದ್ದಾರೆ.ನಾವು ಎಸ್‌ಸಿಒ ಅನ್ನು ವಿಸ್ತೃತ ನೆರೆಹೊರೆಯಾಗಿ ನೋಡುವುದಿಲ್ಲ, ಬದಲಿಗೆ ವಿಸ್ತೃತ ಕುಟುಂಬವಾಗಿ ನೋಡುತ್ತೇವೆ ಎಂದು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group