ಭಾರೀ ಮಳೆ ಸಾಧ್ಯತೆ ➤ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮುಂದಿನ ಕೆಲವು ಗಂಟೆಗಳ ಕಾಲ ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು. 04ರ ಮಧ್ಯಾಹ್ನದಿಂದ ಜು. 05ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು. 04ರ ಮಧ್ಯಾಹ್ನದ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.

Also Read  ಪುತ್ತೂರು ಶಾಸಕ ಅಶೋಕ್ ರೈಯವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

error: Content is protected !!
Scroll to Top