ಕಾಸರಗೋಡು: ಭಾರೀ ಮಳೆ- ರೆಡ್ ಅಲರ್ಟ್ ➤ ನಾಳೆ (ಜು. 05) ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 04. ಕಾಸರಗೋಡು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆಯ ಇಂದಿನ ಎಚ್ಚರಿಕೆಯ ಪ್ರಕಾರ, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಳೆಯೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ಈ ಪರಿಸ್ಥಿತಿಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ರಾಜ್ಯ, ಸಿಬಿಎಸ್‌ಇ ಮತ್ತು ಐಸಿಎಸ್ ಸಿ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಂತಹ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜು. 05) ರಜೆ ಘೋಷಿಸಿದೆ.

Scroll to Top