ವಿಟ್ಲ: ಭಾರೀ ಗಾಳಿ ಮಳೆಗೆ ಓಮ್ನಿ ಕಾರಿನ ಮೇಲೆ ಬಿದ್ದ ಮರ ➤ ವಾಹನ ಸಂಪೂರ್ಣ ಜಖಂ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 05. ಭಾರೀ ಗಾಳಿ ಮಳೆಗೆ ಮನೆ ಮುಂಭಾಗ ನಿಲ್ಲಿಸಲಾಗಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಪೂರ್ಣ ಜಖಂಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.‌

ಕೊಡಾಜೆ ನಿವಾಸಿ ಇಸ್ಮಾಯಿಲ್ ಎಂಬವರು ಓಮ್ನಿ ಕಾರನ್ನು ತನ್ನ ಮನೆಯ ಸಮೀಪ ನಿಲ್ಲಿಸಿದ್ದರು. ಭಾರೀ ಗಾಳಿ ಮಳೆಗೆ ಬೃಹತ್ ಮಾವಿನ ಮರ ಅದರ ಮೇಲೆ ಉರುಳಿ ಬಿದ್ದಿದೆ.‌ ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.

Scroll to Top