ಬಂಟ್ವಾಳ: ಕಾರು ಅಪಘಾತ ➤ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 06. ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ವ್ಯಾಪ್ತಿಯ ತುಂಬೆ ಎಂಬಲ್ಲಿ ಇದೀಗ ಸಂಭವಿಸಿದೆ.

ಮೃತ ಯುವತಿಯನ್ನು ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ರವರ ಮಗಳು ಹನ (19)ಎಂದು ಗುರುತಿಸಲಾಗಿದೆ. ಈಕೆ ತನ್ನ ಸಂಬಂಧಿಕರೊಂದಿಗೆ ಪುತ್ತೂರಿನಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ತುಂಬೆ ಸಮೀಪ ಹೆದ್ದಾರಿಯಲ್ಲಿ ಅಪಘಾತಗೊಂಡಿದ್ದು, ಪರಿಣಾಮ ಕಾರಿನಲ್ಲಿದ್ದ ಚಾಲಕ ಹಾಗೂ ಮೃತ ಯುವತಿಯ ತಾಯಿಗೆ ಗಾಯಗಳಾಗಿವೆ ಎನ್ನಲಾಗಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ವೇಗದಲ್ಲಿ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top