ಇಂದು ಜಾರಿಗೆ ಬರಲಿದೆ ಕಾಂಗ್ರೆಸ್ ಸರಕಾರದ 3ನೇ ಗ್ಯಾರಂಟಿ ಯೋಜನೆ – 5 ಕೆಜಿ ಅನ್ನಭಾಗ್ಯ ಅಕ್ಕಿಯ ಹಣ ಫಲಾನುಭವಿಗಳ ಖಾತೆಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರದಿಂದ ಸಿಗಬೇಕಿದ್ದ 5 ಕೆಜಿ ಅಕ್ಕಿಯ ದಾಸ್ತಾನು ಲಭ್ಯವಿಲ್ಲದೆ ಇರುವುದರಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸುವ ಯೋಜನೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ.

ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳ ಖಾತೆಗೆ ನಗದು ವರ್ಗಾವಣೆ ಮಾಡುವ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅನ್ನಭಾಗ್ಯದಲ್ಲಿ ಹೆಚ್ಚುವರಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅದರ ಬದಲು ಪ್ರತಿ ಕೆಜಿಗೆ 34ರೂ.ನಂತೆ ಒಟ್ಟು 170 ರೂ.ವನ್ನು ಕುಟುಂಬ ಸದಸ್ಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಈಗಾಗಲೇ ಸರಕಾರವು ಘೋಷಿಸಿದೆ.

Also Read  ಒತ್ತಡಕ್ಕೆ ಮಣಿದು ಮಂಗಳೂರು ವಿ.ವಿ.ಯು ಅಂತರಾಷ್ಟ್ರೀಯ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ➤ ಶೌವಾದ್ ಗೂನಡ್ಕ

error: Content is protected !!
Scroll to Top