ಕಡಬ: ಗರ್ಭವತಿಯಾದ ಅಪ್ರಾಪ್ತೆ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ, ಜು. 10. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಗೈದು ಗರ್ಭಿಣಿಯಾಗಲು ಕಾರಣನಾದ ಯುವಕನನ್ನು ಪೋಕ್ಸೋ ಪ್ರಕರಣದಡಿ ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕೋಡಿಂಬಾಳದಿಂದ ತಡವಾಗಿ ವರದಿಯಾಗಿದೆ.

ಬಂಧಿತನನ್ನು ಕೋಡಿಂಬಾಳ ಗ್ರಾಮದ ನಿಶಾಂತ್ ಎಂದು ಗುರುತಿಸಲಾಗಿದೆ. ಈತ ತನ್ನ ಸಂಬಂಧಿ 14ರ ಹರೆಯದ ಬಾಲಕಿಯನ್ನು ಅತ್ಯಾಚಾರವೆಸಗಿ ಎಂಟು ತಿಂಗಳ ಗರ್ಭಕ್ಕೆ ಕಾರಣಾಗಿದ್ದ ಎಂದು ಅರೋಪಿಸಲಾಗಿದೆ. ಬಾಲಕಿಯು ತಾಯಿ ಜೊತೆ ಕಡಬ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾದ ಘಟನೆ ಬೆಳಕಿಗೆ ಬಂದಿದೆ. ಶಾಲಾ ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ನಿಶಾಂತ್ ನನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Also Read  ಕೆಜಿಎಫ್ 2 ಚಿತ್ರೀಕರಣಕ್ಕೆ ರಾಕಿಂಗ್ ಸ್ಟಾರ್ ಯಶ್ ಮಂಗಳೂರಿಗೆ ಗ್ರಾಂಡ್‌ ಎಂಟ್ರಿ

error: Content is protected !!
Scroll to Top